ಬೆಂಗಳೂರು: ಟಿಪ್ಪು ಎಂದು ಕೇಳಿದರೆ ಸಾಕು ಸಿದ್ದರಾಮಯ್ಯಗೆ ಮೈಮೇಲೆ ಬರುತ್ತೆ ಎಂದು ಲೇವಡಿ ಮಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಕುಟಿಕಿದ್ದಾರೆ.
ಟಿಪ್ಪು ಸುಲ್ತಾನ್ ಎಂದಾಗ ಮೊದಲು ಮೈಮೇಲೆ ಬಂದದ್ದು ಬಿಜೆಪಿ ನಾಯಕರಿಗೆ ಎಂದು ಹೇಳಿದ ಸಿದ್ದು, ಹತ್ತು ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಮೈಮೇಲೆ ಬಂದಾಗಲೇ ಡಾ. ಶೇಕ್ ಅಲಿಯವರಿಂದ ಟಿಪ್ಪು ಬಗ್ಗೆ 425 ಪುಟಗಳ ಪುಸ್ತಕ ಬರೆಸಿ ಸರ್ಕಾರದಿಂದಲೇ ಪ್ರಕಟಿಸಿದ್ದು ಎಂದು ಟೀಕಿಸಿದ್ದಾರೆ.
ಟಿಪ್ಪುವಿನ ರಾಷ್ಟ್ರೀಯ ರಾಜ್ಯದ ಕಲ್ಪನೆ, ಸಮರ ಕಲೆ, ಸುಧಾರಣೆಯ ಹುರುಪು , ಟಿಪ್ಪುವನ್ನು ಎಣೆಯಿಲ್ಲದ ನಾಯಕ ಎಂದು ತಾವೇ ಪ್ರಕಟಿಸಿದ್ದ ಪುಸ್ತಕದಲ್ಲಿ ಜಗದೀಶ್ ಶೆಟ್ಟರ್ ಮತ್ತು ಗೋಂವಿದ್ ಕಾರಜೋಳ ಅವರು ಹಾಡಿಹೊಗಳಿದ್ದಾಗ ತಾವೆಲ್ಲಿ ಅಡಗಿ ಕೂತಿದ್ದಾರೆ ಎಂದು ಅಪಹಾಸ್ಯ ಮಾಡಿದ್ದಾರೆ.