ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ, ಮಾಜಿ ಪ್ರಧಾನಿ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ: ಸಿದ್ದರಾಮಯ್ಯ

Prasthutha|

ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ. ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ? ಎಂದು ಸರಣಿ ಪ್ರಶ್ನೆಗಳನ್ನು ಸಿಎಂ ಸಿದ್ದರಾಮಯ್ಯ ಮಾಜಿ ಪಿಎಂ ‌ದೇವೇಗೌಡರಿಗೆ ಕೇಳಿದ್ದಾರೆ.

- Advertisement -

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಯಾಚಿಸಿದ ಸಿಎಂ, ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಎಂದು ಕಿಡಿಕಾರಿದರು.

ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸಕ್ಕೆ ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ, ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು.

Join Whatsapp
Exit mobile version