ಪಣಜಿ: ಚುನಾವಣೆ ಹೊಸ್ತಿಲಲ್ಲಿರುವುದರಿಂದ ಗೋವಾದಲ್ಲಿ ರಾಜಕೀಯ ಪಕ್ಷದ ನಾಯಕರ ವಾದಗಳು ಹೆಚ್ಚಾಗುತ್ತಿವೆ.
ಗೋವಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆ ನಡೆಯುತ್ತಿದ್ದು, ಬೇರೆ ಯಾವುದೇ ಪಕ್ಷ ಕಣದಲ್ಲಿಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
“ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೋರಾಟ ನಡೆಯಲಿದ್ದು ಬೇರೆ ಯಾವುದೇ ಪಕ್ಷಗಳಿಲ್ಲ. ಆದ್ದರಿಂದ ದಯವಿಟ್ಟು ನಿಮ್ಮ ಮತವನ್ನು ವ್ಯರ್ಥ ಮಾಡಬೇಡಿ” ಎಂದು ಚುನಾವಣಾ ಪ್ರಚಾರದ ಭಾಗವಾಗಿ ವರ್ಚುವಲ್ ರ‍್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.
ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿರುವ ಅವರು, ಕೋವಿಡ್ ನಿರ್ವಹಣೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯ ವಿಷಯದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.