ಬೆಂಗಳೂರು, ಫೆಬ್ರವರಿ 13: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಕುವಂತೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.
ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿದ್ದೆನಾ? ನಾನು ಹುಟ್ಟಿದ್ದೇನೆ, ಜಾತಿ ವ್ಯವಸ್ಥೆ ಇದೆ. ಕರ್ಮ ಅನ್ನೋದು ಇದು ಪಟ್ಟಭದ್ರ ಹಿತಾಸಕ್ತಿಗಳು ಮಾಡಿದ್ದು. ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದಲ್ಲಿ ದುಡ್ಡು ಇಲ್ಲ ಎಂಬುದಾಗಿ ಹೇಳುವುದಿಲ್ಲ ಎಂದು ಸಿಎಂ ಹೇಳಿದರು.