ಚೆನ್ನೈ: ಹಲವು ಸುತ್ತಿನ ಮಾತುಕತೆ ಬಳಿಕ ತಮಿಳುನಾಡು ಹಾಗೂ ನೆರೆಯ ಪುದುಚೇರಿಯಲ್ಲಿ 10 ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಡಿಎಂಕೆ ಹಂಚಿಕೆ ಮಾಡಿದೆ. ಇದು 2019ರ ಸೀಟು ಹಂಚಿಕೆ ಸೂತ್ರದ ಪುನಾರಾವರ್ತನೆಯಾಗಿದೆ.
ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಒಂಬತ್ತು ಸ್ಥಾನಗಳನ್ನು ಮತ್ತು ಪುದುಚೇರಿಯಲ್ಲಿ ಒಂದು ಸ್ಥಾನವನ್ನಷ್ಟೇ ಕಾಂಗ್ರೆಸ್‌ಗೆ ನೀಡಲಾಗಿದೆ.
ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕೆ ಸೆಲ್ವಪೆರುಂತಗೈ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ಅಜೋಯ್ ಕುಮಾರ್ ಅವರ ಸಮ್ಮುಖದಲ್ಲಿ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲಾಯಿತು.
ಸುದ್ದಿಗಾರರ ಜೊತೆಗೆ ಮಾತನಾಡಿದ ವೇಣುಗೋಪಾಲ್, ಡಿಎಂಕೆ ನೇತೃತ್ವದ ಮೈತ್ರಿಕೂಟವು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು ಮತ್ತು ಕಾಂಗ್ರೆಸ್- ಡಿಎಂಕೆ ನಡುವಿನ ‘ಬಾಂಧವ್ಯ ಗಟ್ಟಿಯಾಗಿದೆ ಎಂದು ಅವರು ತಿಳಿಸಿದರು.