ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಸಂಸದ ಇ.ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

- Advertisement -

- Advertisement -

ಬಳ್ಳಾರಿ: ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆದಿದೆ.

ಶಾಸಕರಾದ ನಾರಾ ಭರತ್‌ ರೆಡ್ಡಿ, ಗಣೇಶ್‌ (ಕಂಪ್ಲಿ ಕ್ಷೇತ್ರ), ಶ್ರೀನಿವಾಸ್‌ ಅವರ ಮನೆ ಮೇಲೂ ಇ.ಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್‌ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.

- Advertisement -

ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.

- Advertisement -


Must Read

Related Articles