ನವದೆಹಲಿ: ಸಾಮಾಜಿಕ ಮಾಧ್ಯಮಗಳು ವ್ಯಾಪಕವಾಗಿ ಉಪಯೋಗವಾಗುತ್ತಿರುವ ಈ ಕಾಲಘಟ್ಟದಲ್ಲಿ ಜನರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರು ಶುಕ್ರವಾರ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರಿಗೆ ಸಂಬಂಧಿಸಿದ ವೀಡಿಯೋವೊಂದನ್ನು ಬಿಡುಗಡೆ ಗೊಳಿಸಿ ಮಾತನಾಡುತ್ತಿದ್ದರು.
ವಾಟ್ಸಾಪ್, ಟ್ವಿಟ್ಟರ್ ಮತ್ತು ಫೇಸ್ಬುಕ್ ಸಹಿತ ಹಲವು ಸಾಮಾಜಿಕ ಮಾಧ್ಯಮಗಳು ವ್ಯಾಪಕವಾಗಿರುವ ಹಿಂದಿನ ಕಾಲಘಟ್ಟದಲ್ಲಿ ಪ್ರಸಕ್ತ ರಾಜಕೀಯ ವ್ಯವಸ್ಥೆಯು ಜನರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು. ಇದು ಪ್ರಭುತ್ವ ನಡೆಸುವ ಸರ್ವಾಧಿಕಾರದ ಪರಮಾವಧಿಯೆಂದು ಅವರು ಬಣ್ಣಿಸಿದರು.