ರಾಜ್ಯದಲ್ಲಿ ಅ. 24ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ಆರಂಭದಲ್ಲೇ ಮಳೆಯ ಕೊರತೆ ಉಂಟಾಗಿತ್ತು. ಅಕ್ಟೋಬರ್ ಮೊದಲ ವಾರದಿಂದಲೂ ಹಿಂಗಾರು ಮಳೆ ಸಹ ವಿಳಂಬವಾಯಿತು. ಕಳೆದ 20 ದಿನಗಳಲ್ಲಿ ಕರ್ನಾಟಕದಲ್ಲಿ 53% ರಷ್ಟು ಮಳೆ ಕೊರತೆ ಆಗಿದೆ. ಹೀಗಿರುವಾಗ ಹವಾಮಾನ ಇಲಾಖೆ ಖುಷಿಯ ವಿಚಾರ ತಿಳಿಸಿದ್ದು, ರಾಜ್ಯದಲ್ಲಿ ಅಕ್ಟೋಬರ್ 24ರವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

- Advertisement -

ಇಷ್ಟು ದಿನಗಳ ಮಳೆಯಾಗದ ಹಿನ್ನೆಲೆ ರಾಜ್ಯದ ಪ್ರಮುಖ ಜಲಶಾಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕರ್ನಾಟಕದಲ್ಲಿ ನಿರೀಕ್ಷಿತ ಮುಂಗಾರು ಮಳೆ ಬಾರದೇ ಬರಗಾಲ ಉಂಟಾಯಿತು. ಆದರೆ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಮುಂದಿನ 3 ದಿನಗಳ ಕಾಲ ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೈಸೂರು, ಕೊಡಗು ಜಿಲ್ಲೆಗಳಲ್ಲಿ ತುಂಬಾ ಮಳೆ ಬರಲಿದೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸಂಜೆ ವೇಳೆಗೆ ಮಳೆಯ ಅಬ್ಬರ ಹೆಚ್ಚಗಲಿದೆ ಎನ್ನಲಾಗಿದೆ. ಅಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -

ಇನ್ನು ಬೆಂಗಳೂರು ನಗರದಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದಿದೆ.

Join Whatsapp