ಕೋವಿಡ್ ಹೆಚ್ಚಳ ಹಿನ್ನೆಲೆ; ಮುನ್ನೆಚ್ಚರಿಕೆ ವಹಿಸುವಂತೆ ಐದು ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ

Prasthutha|

ಹೊಸದಿಲ್ಲಿ: ಗಣನೀಯವಾಗಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಅಗತ್ಯ ಎಚ್ಚರಿಕೆ ಮತ್ತು ಸೋಂಕು ಹರಡುವುದನ್ನು ತಡೆಯಲು  ಹಾಗೂ  ಅಗತ್ಯವಿದ್ದಲ್ಲಿ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಐದು ರಾಜ್ಯಗಳಿಗೆ ಪತ್ರ ಬರೆದಿದೆ.

- Advertisement -

ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರದ ಗಡಿ ದಾಟಿದ್ದು, ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಪತ್ರ ಬರೆಯಲಾಗಿದೆ. ಕಳೆದ ಮೂರು ತಿಂಗಳ ಹಿಂದೆ  ದೇಶದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣ ವರದಿಯಾಗಿತ್ತು.

ದೇಶದ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಈ ಐದು ರಾಜ್ಯಗಳಲ್ಲಿ ಸೋಂಕು ಹರಡುವಿಕೆ ಗಣನೀಯವಾಗಿ ಹೆಚ್ಚಾಗಿದೆ. ಆದ್ದರಿಂದ  ಸಾರ್ವಜನಿಕ ಆರೋಗ್ಯದ ಹಿತಾಸಕ್ತಿಯಿಂದ ಅಪಾಯ ಸಾಧ್ಯತೆ ಮೌಲ್ಯಮಾಪನ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು. ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಈಗ ಸಾಧಿಸಿರುವ ಸಾಧನೆಯ ಪ್ರಯೋಜನಗಳನ್ನು ಕಳೆದು ಕೊಳ್ಳಬಾರದು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ಸಲಹೆ ನೀಡಿದ್ದಾರೆ.

- Advertisement -

ಕಳೆದ ಮೂರು ತಿಂಗಳಲ್ಲಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದನ್ನು ಕೂಡಾ ಉಲ್ಲೇಖಿಸಿದ ಅವರು, ಇದೀಗ  ಅಲ್ಪಮಟ್ಟಿಗೆ ಏರಿಕೆಯಾಗುತ್ತಿದ್ದು, ಸಾಪ್ತಾಹಿಕ ಧನಾತ್ಮಕತೆ ದರ ಕೂಡ ಹೆಚ್ಚುತ್ತಿರುವುದು ಕಂಡುಬರುತ್ತಿದೆ ಎಂದು ವಿವರಿಸಿದ್ದಾರೆ.

Join Whatsapp