Home ಟಾಪ್ ಸುದ್ದಿಗಳು ವಿಧಾನಸಭೆ ಚುನಾವಣೆ ಹಿನ್ನೆಲೆ; ಎಂ.ಎಲ್.ಎ. ಟಿಕೆಟ್ ವಾರ್

ವಿಧಾನಸಭೆ ಚುನಾವಣೆ ಹಿನ್ನೆಲೆ; ಎಂ.ಎಲ್.ಎ. ಟಿಕೆಟ್ ವಾರ್

ಮೂಡಿಗೆರೆ: ವಿಧಾನಸಭೆ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ಬೇಡವೇ ಬೇಡ ಎಂದು ಕಾರ್ಯಕರ್ತರು ಬಹಿರಂಗ ಸಭೆ ನಡೆಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿ ವ್ಯಾಪ್ತಿಯಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ನಯನಾಗೆ ಟಿಕೆಟ್ ನೀಡದಂತೆ ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ನಾಯಕರಿಗೂ ಮನವಿ ಮಾಡಲು ನಿರ್ಧರಿಸಿದ್ದಾರೆ.

ನಯನಾಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲು ಖಚಿತ. ಕ್ಷೇತ್ರದ ಜನ ನಯನ ಅವರನ್ನು ಒಪ್ಪುತ್ತಿಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೂಡ ನಯನಾಗೆ ಟಿಕೆಟ್ ನೀಡಲು ವಿರೋಧಿಸಿದ್ದಾರೆ. ಈಗಾಗಲೇ ಮೋಟಮ್ಮ ಐದು ಬಾರಿ ಸೋಲು ಕಂಡಿದ್ದಾರೆ. ಈ ಮಧ್ಯೆ ನಾನು ರಾಜಕೀಯದಿಂದ ನಿವೃತ್ತಿಯಾಗಿದ್ದೇನೆ ಎಂದು ಅವರೇ ಹೇಳಿಕೊಂಡಿದ್ದಾರೆ. ಅವರ ಮಗಳಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುವುದು ಗ್ಯಾರಂಟಿ. ಹಾಗಾಗಿ ಸ್ಥಳೀಯರು ಹಾಗೂ ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿ ನಯನ ವಿರುದ್ಧ ಬಹಿರಂಗ ಸಭೆ ನಡೆಸಿದ್ದಾರೆ.

ಕಳೆದೊಂದು ವಾರದ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಮೂಡಿಗೆರೆಯಲ್ಲೂ ಸಭೆ ಸೇರಿ ಅಸಮಾಧಾನ ಹೊರಹಾಕಿದ್ದರು. ಮುಂದಿನ ವಾರದಲ್ಲಿ ಗೋಣಿಬೀಡು ಹೋಬಳಿಯಲ್ಲೂ ಸಭೆ ಸೇರುವುದಾಗಿ ತೀರ್ಮಾನಿಸಿದ್ದಾರೆ. ನಯನ ವಿರುದ್ಧ ಕಾಂಗ್ರೆಸ್ ಹೋಬಳಿಗಳಿಗೆ ಹೋಗಿ ಸಭೆ ನಡೆಸಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಹೊಸ ಮುಖಕ್ಕೆ ಮಣೆ ಹಾಕುವಂತೆ ರಾಜ್ಯ ನಾಯಕರಿಗೆ ಆಗ್ರಹಿಸಿದ್ದಾರೆ.

Join Whatsapp
Exit mobile version