ಆಯೋದ್ಯೆ: ಇತ್ತೀಚೆಗೆ ಉತ್ತರ ಪ್ರದೇಶದ ಆಯೋದ್ಯೆಯಲ್ಲಿ 7 ವರ್ಷದ ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯ ನಾಗರಿಕರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಸದ್ಯ ಅಮಾನುಷವಾಗಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಲಕ್ನೋದ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪ್ರಕರಣವನ್ನು ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತೆಯನ್ನು ಅತ್ಯಾಚಾರ ನಡೆಸಿದ ಆರೋಪಿಯನ್ನು ಮರಣದಂಡನೆಗೊಳಪಡಿಸುವಂತೆ ಆಗ್ರಹಿಸಿ ನೂರಾರು ಜನ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದ್ದರು.
ಪ್ರಸಕ್ತ ಎರಡನೇ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉತ್ತರ ಪ್ರದೇಶ ಅತ್ಯಾಚಾರ, ಕೊಲೆ, ಕೊಲೆಯತ್ನ, ದರೋಡೆ, ಸುಲಿಗೆ ವ್ಯಾಪಕವಾಗುತ್ತಿದ್ದು, ಗೂಂಡಾರಾಜ್ಯವಾಗಿ ಪರಿವರ್ತನೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.