Home ಟಾಪ್ ಸುದ್ದಿಗಳು ದ.ಕ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ: ಮದ್ಯ ಮಾರಾಟ ನಿಷೇಧ

ದ.ಕ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ: ಮದ್ಯ ಮಾರಾಟ ನಿಷೇಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 24ರ ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 25ರ ಸಂಜೆ ಚುನಾವಣೆ ಮುಗಿಯುವವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.


ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.


ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾಮ ಪಂಚಾಯತ್ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ ಫೆಬ್ರವರಿ 24 ಮತ್ತು ಫೆಬ್ರವರಿ 25ರವರೆಗೆ ಚುನಾವಣೆ ನಡೆಯಲಿದ್ದು, ಈ ಭಾಗಗಳಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

Join Whatsapp
Exit mobile version