ವಿರಾಜಪೇಟೆಯಲ್ಲಿ ಕಾಂಗ್ರೆಸ್ ಗೆ ಗೆಲುವು, ಆರ್.ಆರ್. ನಗರದಲ್ಲಿ ಕುಸುಮಾಗೆ ಮುನ್ನಡೆ

Prasthutha|

ಬಿಜೆಪಿಯ ಭದ್ರಕೋಟೆಯಾಗಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದಾರೆ.

- Advertisement -

ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ವಿರುದ್ಧ ಸೋಲನುಭವಿಸಿದ್ದಾರೆ.  

- Advertisement -

ಭಾರೀ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಮುನ್ನಡೆ ಸಾಧಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ, ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ಆಗ ಎದುರಾಗಿದ್ದ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹನುಮಂತಪ್ಪ ಅವರೇ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.

Join Whatsapp