Home ಟಾಪ್ ಸುದ್ದಿಗಳು ವಿರಾಜಪೇಟೆಯಲ್ಲಿ ಕಾಂಗ್ರೆಸ್ ಗೆ ಗೆಲುವು, ಆರ್.ಆರ್. ನಗರದಲ್ಲಿ ಕುಸುಮಾಗೆ ಮುನ್ನಡೆ

ವಿರಾಜಪೇಟೆಯಲ್ಲಿ ಕಾಂಗ್ರೆಸ್ ಗೆ ಗೆಲುವು, ಆರ್.ಆರ್. ನಗರದಲ್ಲಿ ಕುಸುಮಾಗೆ ಮುನ್ನಡೆ

ಬಿಜೆಪಿಯ ಭದ್ರಕೋಟೆಯಾಗಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ವಿರುದ್ಧ ಸೋಲನುಭವಿಸಿದ್ದಾರೆ.  

ಭಾರೀ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಮುನ್ನಡೆ ಸಾಧಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ, ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ಆಗ ಎದುರಾಗಿದ್ದ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹನುಮಂತಪ್ಪ ಅವರೇ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು.

Join Whatsapp
Exit mobile version