ಮುಂಬೈ: ಶಿವಸೇನೆಗೆ ಮತ್ತೊಂದು ಹಿನ್ನಡೆಯಾಗಿ, ಪಕ್ಷದ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ರಾಮದಾಸ್ ಕದಂ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿರುವ ಕದಂ, ಶಿವಸೇನೆ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕದಮ್ ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ರಾಜೀನಾಮೆಯನ್ನು ಪೋಸ್ಟ್ ಮಾಡಿದ್ದಾರೆ.
ಕದಂ ಅವರು ರಾಜ್ಯದ ಬಿಜೆಪಿ-ಸೇನಾ ಸರ್ಕಾರದಲ್ಲಿ ರಾಜ್ಯ ಪರಿಸರ ಸಚಿವರಾಗಿ ಸೇವೆ ಸಲ್ಲಿಸಿದ್ದರುಉದ್ಧವ್ ಠಾಕ್ರೆ ಬಣದಲ್ಲಿ ಗುರುತಿಸಿಕೊಂಡಿದ್ದ ರಾಮದಾಸ್ ಕದಂ ಅವರು ಪಕ್ಷದಲ್ಲಿ ಪ್ರಮುಖ ನಾಯಕರಾಗಿದ್ದು, ಅವರ ರಾಜೀನಾಮೆಯಿಂದ ಠಾಕ್ರೆಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ರಾಮದಾಸ್ ಕದಂ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಅವರು ಬಾಳಾಸಾಹೇಬ್ ಠಾಕ್ರೆ ಅವರ ಸಿದ್ಧಾಂತಗಳನ್ನು ಗಾಳಿಗೆ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.