ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ ಧ್ವಜ ಹಸ್ತಾಂತರದ ಮೂಲಕ ಚುನಾವಣಾ ಪ್ರಚಾರ ವಾಹನ ಉದ್ಘಾಟನೆ ಮಾಡಲಾಯಿತು.
ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್ ರವರು ಶಾಹುಲ್ ತಲಪಾಡಿ ಅವರಿಗೆ ಧ್ವಜ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಕ್ಷೇತ್ರಾಧ್ಯಕ್ಷ ಮೂನಿಷ್ ಆಲಿ, ಕ್ಷೇತ್ರ ಸಮಿತಿ ಸದಸ್ಯ ಮುಸ್ತಾಕ್ ತಲಪಾಡಿ ಉಪಸ್ಥಿತರಿದ್ದರು.