►ಮೂರು ದಿನ ಭಾರಿ ಮಳೆ ಸಾಧ್ಯತೆ…
ಚಿಕ್ಕಮಗಳೂರು: ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಾಳೂರು, ಬಣಕಲ್, ಸುತ್ತ ಮುತ್ತಾ ಭಾರಿ ಗಾಳಿ ಮಳೆಯಾಗುತ್ತಿದ್ದು, ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದ ಹಲವು ಮನೆ ಜಲಾವೃತವಾಗಿದೆ.
ದಿಢೀರ್ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು ಹಾನಿಯಾಗಿದೆ.