ದಕ್ಷಿಣ ಕನ್ನಡದಲ್ಲಿ ಎಡೆಬಿಡದ ಮಳೆ: ಜನ ಜೀವನ ಅಸ್ತವ್ಯಸ್ತ

Prasthutha|

ಮಂಗಳೂರು: ನಿನ್ನೆ ರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಂಗಳೂರು ನಗರದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

- Advertisement -


ನಾಳೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.


ಇಂದು ಬೆಳ್ಳಗ್ಗೆಯಿಂದ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ನಗರದ ಕೆಲವು ರಸ್ತೆಗಳೆಲ್ಲಾ ಮಳೆ ನೀರಿನಿಂದ ಆವೃತ್ತವಾಗಿದೆ. ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಟ್ರಾಫಿಕ್ ಜಾಮ್ ಆಗಿದೆ.

- Advertisement -


ಹವಾಮಾನ ಇಲಾಖೆಯು 6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಗಾಳಿ ಯಾಗಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

Join Whatsapp