ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿಗೆ ಎಲ್ಲೆಡೆಯಿಂದ ಬೇಡಿಕೆ ಬರುತ್ತಿದ್ದು, ಮರಾಠ ಮೀಸಲಾತಿಯನ್ನು 2 ಎಗೆ ಸೇರ್ಪಡೆ ಮಾಡುವಂತೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಪ್ರಮುಖ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ಅವರು ಕೈಗೊಂಡಿದ್ದಾರೆ. ಸುಮಾರು 4 ದಶಕಗಳಲ್ಲಿ ಈ ಬೇಡಿಕೆ ಇತ್ತು. ಅದನ್ನು ಈಡೇರಿಸಲಾಗಿದೆ. ಅವರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು ಎಂದು ತಿಳಿಸಿದರು.
ಗೋಶಾಲೆಗಳ ಸಂಬಂಧ 100 ಕೋಟಿ ಅನುದಾನ ನೀಡಲಾಗಿದೆ ಎಂದ ಅವರು ತಮ್ಮ ಸಚಿವಾಲಯದ ಮೂಲಕ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ್ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚೌಹಾಣ್, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.