ಬೆಂಗಳೂರು: ಇತ್ಯರ್ಥವಾದ ವಿಷಯಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (IT) ಶುಕ್ರವಾರ ರಾತ್ರಿ ನನಗೆ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುತ್ತೇವೆ ಎಂದು ಬಿಜೆಪಿಯವರಿಗೆ ಗೊತ್ತು. ಹೀಗಾಗಿ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈಗಾಗಲೇ ಇತ್ಯರ್ಥವಾದ ವಿಚಾರಕ್ಕೆ ನೋಟಿಸ್ ಬಂದಿದೆ ಎಂದರು.