ಹೊಸದಿಲ್ಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ ಪರೀಕ್ಷೆ ಹೆಚ್ಚಿಸಲೇಬೇಕು. ಸದ್ಯ ಅವುಗಳ ಪ್ರಮಾಣ ಇಳಿಮುಖವಾಗಿದೆ ಎಂದು ಕೇಂದ್ರ ಸರಕಾರ ರಾಜ್ಯಗಳಿಗೆ ತಿಳಿಸಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಲ್ಲಿನ ಹೆಚ್ಚುವರಿ ಕಾರ್ಯದರ್ಶಿ, ಆರತಿ ಝಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಈ ಅಂಶ ಪ್ರಸ್ತಾವಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಸೋಂಕು ಪತ್ತೆ ಪರೀಕ್ಷೆಗಳ ಸಂಖ್ಯೆಯಲ್ಲಿ ಹೆಚ್ಚಾಗಬೇಕಾಗಿದೆ.
ಐಸಿಎಂಆರ್ ನಲ್ಲಿ ಲಭ್ಯವಿರುವ ಮಾಹಿತಿ ಗಮನಿಸಿದರೆ, ಕೆಲವು ರಾಜ್ಯಗಳು ಕೊರೊನಾ ಪರೀಕ್ಷೆಯನ್ನು ಕಡಿಮೆಯಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಒಮಿಕ್ರಾನ್ ಹೆಚ್ಚು ಗಮನದಲ್ಲಿ ಇರಿಸಬೇಕಾದ ರೂಪಾಂತರಿ ಎಂದು ಎಚ್ಚರಿಕೆ ನೀಡಿದೆ. ಈ ಕಾರಣಕ್ಕಾಗಿ ಪರೀಕ್ಷೆ ಯನ್ನು ಹೆಚ್ಚಿಸಬೇಕು ಎಂದು ಹೇಳಿದ್ದಾರೆ.