ಮಹಿಳೆಯರಲ್ಲಿ ವ್ಯವಹಾರ ಜ್ಞಾನದ ಹೆಚ್ಚಳ ದೇಶದ ಪ್ರಗತಿಗೆ ಪೂರಕ: ಶಾಸಕ ಎಚ್.ಹಾಲಪ್ಪ ಹರತಾಳು

Prasthutha: June 26, 2022

ಹೊಸನಗರ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಕೇವಲ ಮನೆ ಕೆಲಸಗಳಿಗೆ ಸೀಮಿತರಾಗಿದ್ದ ಗ್ರಾಮೀಣ ಮಹಿಳೆಯರು ಇಂದು ಸ್ವತಂತ್ರವಾಗಿ ವ್ಯವಹಾರ ನಡೆಸುವಷ್ಟರ ಮಟ್ಟಿಗೆ ತಿಳುವಳಿಕೆ ಹೊಂದಿದ್ದಾರೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.

ಸ್ತ್ರೀಶಕ್ತಿ ಯೋಜನೆಯಡಿ ಅಮೃತ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಉದ್ದಿಮೆಯ ಪ್ರೋತ್ಸಾಹ ಧನದ ಚೆಕ್ ವಿತರಣೆ ನಡೆಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಸ್ತ್ರೀಯರು ಸಂಘಗಳಲ್ಲಿ ಸಕ್ರಿಯರಾಗಿದ್ದು, ವ್ಯವಹಾರಿಕ ಜ್ಞಾನ ಬೆಳೆಸಿಕೊಳ್ಳುತ್ತಿರುವುದು ದೇಶದ ಪ್ರಗತಿಗೆ ಪೂರಕವಾಗಿದೆ.ಕೆಲ ದಶಕಗಳ ಹಿಂದೆ ಇದ್ದ ಸ್ತ್ರೀಯರ ಪರಿಸ್ಥಿತಿ ಇಂದು ಸುಧಾರಿಸಿದೆ. ಸಾಮಾಜಿಕವಾಗಿ ಸಹಾ ಸಾಕಷ್ಟು ಬದಲಾವಣೆಗಳಾಗಿವೆ. ರಾಜಕೀಯ ಕ್ಷೇತ್ರದಲ್ಲಿಯೂ ಸಹಾ ಮಹಿಳೆಯರು ಮುಂಚೂಣಿಗೆ ಬರುತ್ತಿರುವುದು ದೇಶದ ಹಿತದೃಷ್ಠಿಯಿಂದ ಉತ್ತಮ ಬೆಳವಣಿಗೆಯಾಗಿದೆ. ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡುಎಲ್ಲಾ ರಂಗಗಳಲ್ಲಿ ಮಹಿಳೆಯರು ಇನ್ನಷ್ಟು ಪ್ರಗತಿ ಹೊಂದಬೇಕು. ಈ ವಿಚಾರದಲ್ಲಿ ಸಂಘಗಳು ಸಕ್ರಿಯವಾಗಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್.ಆರ್.ದೇವಾನಂದ, ಎಂಸಿಎ ನಿರ್ದೇಶಕ ಎಚ್.ಆರ್.ತೀರ್ಥೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಉಪಾಧ್ಯಕ್ಷೆ ಕೃಷ್ಣವೇಣಿ, ಮುಖ್ಯಾಧಿಕಾರಿ ಬಾಲಚಂದ್ರಪ್ಪ, ತಹಸೀಲ್ದಾರ್ ವಿ.ಎಸ್.ರಾಜೀವ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್.ಪ್ರವೀಣ್, ಸಿಡಿಪಿಓ ಶಶಿರೇಖಾ, ರಾಜು, ಮನೋಧರ, ಶಾಸಕರ ಆಪ್ತ ಕಾರ್ಯದರ್ಶಿ ಮಂಡಾಣಿ ಮೋಹನ್‌, ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ