ಬೆಂಗಳೂರು: ಕರ್ನಾಟಕದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯಾಗಿವೆ.
ಸ್ತನ ಕ್ಯಾನ್ಸರ್ನಿಂದ ಮರಣ ಹೊಂದುವವರ ಸಂಖ್ಯೆ ಎರಡರಷ್ಟು ಏರಿಕೆ ಆಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ನರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ (NCDIR) ಅಂಕಿ ಅಂಶಗಳು ಹೇಳಿದೆ.
25 ರಿಂದ 30 ವರ್ಷದವರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಕಾಣಿಸುತ್ತಿವೆ. ಮದ್ಯಪಾನ, ವಿಳಂಬ ಮದುವೆ ಕೂಡ ಈ ಕ್ಯಾನ್ಸರ್ ಬೆಳವಣಿಗೆಗೆ ಪ್ರಮುಖ ಕಾರಣಗಳಾಗಿವೆ ಎನ್ನಲಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಸಹಾಯಕ ಸಚಿವ ಸತ್ಯಪಾಲ್ ಸಿಂಗ್ ಬಾಫೇಲ್ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆಯ ಅಧಿವೇಶನದಲ್ಲಿ ಕರ್ನಾಟಕದಲ್ಲಿ 2023ರಲ್ಲಿ ಅಂದಾಜು 14,484 ಸ್ತನ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ, 5,388 ಸ್ತನ ಕ್ಯಾನ್ಸರ್ ಸಂಬಂಧಿತ ಸಾವುಗಳು ರಾಜ್ಯದಲ್ಲಿ ದಾಖಲಾಗಿವೆ ಎಂದು ಮಾಹಿತಿ ಹಂಚಿಕೊಂಡಿದ್ದರು.
ಕೆಲವು ವರ್ಷಗಳ ಹಿಂದೆ ಸ್ತನ ಕ್ಯಾನ್ಸರ್ ಪ್ರಕರಣಗಳು ವೃದ್ಧೆಯರಲ್ಲಿ ಸಾಮಾನ್ಯವಾಗಿತ್ತು. ಆದರೆ ಈಗಿನ ಅಂಕಿ ಅಂಶಗಳು ಯುವ ಜನರಲ್ಲಿ ಪ್ರಕರಣ ಹೆಚ್ಚಾಗಿರುವುದನ್ನು ತೋರಿಸುತ್ತಿದೆ ಎಂದು ಮೈಸೂರಿನ ಕೆಆರ್ ಆಸ್ಪತ್ರೆಯ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ವರದಿ ನೀಡಿದ್ದಾರೆ.
ಅಸಮರ್ಪಕ ಆಹಾರ ಪದ್ಧತಿ, ಆಧುನಿಕ ಜೀವನಶೈಲಿ ಮತ್ತು ಕೆಲವು ಸಂದರ್ಭಗಳಲ್ಲಿ ಆನುವಂಶಿಕ ಕಾರಣಗಳಿಂದ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ ಎನ್ನಲಾಗಿದೆ.