Home ಟಾಪ್ ಸುದ್ದಿಗಳು ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್

ಕೋಲ್ಕತ್ತಾ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾಪುರ್ ಮುನ್ಸಿಪಲ್ ಪ್ರದೇಶದಲ್ಲಿ ಲಾಕ್ ಡೌನ್ ಜಾರಿಯಾಗಿದೆ. ರಾಜಧಾನಿ ಕೋಲ್ಕತಾ ದಿಂದ 20 ಕಿಲೋ ಮೀಟರ್ ದೂರದಲ್ಲಿ ಸೋನಾಪುರ್ ಪ್ರದೇಶವಿದೆ.


ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕೇವಲ ತುರ್ತು ಸೇವೆಗಳಿಗಷ್ಟೇ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸೋನಾಪುರ್ ಪ್ರದೇಶದಲ್ಲಿ 19 ಕಂಟೈನ್ ಮೆಂಟ್ ವಲಯಗಳನ್ನು ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ.


ಕೋಲ್ಕತ್ತಾ ಕಳೆದ 24ಗಂಟೆಗಳಲ್ಲಿ ಶೇ.25ರಷ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, 248 ಪ್ರಕರಣ ಪತ್ತೆಯಾಗಿ, ಆರು ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್ 19 ಪ್ರಕರಣಗಳು ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Join Whatsapp
Exit mobile version