Home ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಯದ ಕೋವಿಡ್ ಪಾಸಿಟಿವಿಟಿ | ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಕ್ಕೆ ಜಿಲ್ಲಾಧಿಕಾರಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಯದ ಕೋವಿಡ್ ಪಾಸಿಟಿವಿಟಿ | ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಕ್ಕೆ ಜಿಲ್ಲಾಧಿಕಾರಿ ಬ್ರೇಕ್

ಮಂಗಳೂರು: ಸೆಪ್ಟೆಂಬರ್ 15ರ ವರೆಗೆ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಸೂಚನೆ ನೀಡಿದ್ದಾರೆ. ಸದ್ಯ ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸಂಖ್ಯೆ ಶೇ. 2.4 ರಷ್ಟಿರುವ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕವೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ರಾಜೇಂದ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾತ್ರವಷ್ಟೆ ಬ್ಯಾಚ್ ವೈಸ್ ಮುಲಕ ಭೌತಿಕ ತರಬೇತಿಗೆ ಅವಕಾಶ ನೀಡಲಾಗಿದ್ದು ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು. ಇನ್ನು ಸೆಪ್ಟೆಂಬರ್ 15ರೊಳಗೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸಂಖ್ಯೆಯು ಇಳಿಕೆಗೊಂಡಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚರ್ಚಿಸಲಾಗುವುದು ಎಂದರು.

ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು, ಲಸಿಕೆ ಪಡೆಯದ ಸಿಬ್ಬಂದಿಗಳ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು, ಮೊಬೈಲ್ ನೆಟ್ವ ರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ, ಜಿಲ್ಲಾಡಳಿತದ ವತಿಯಿಂದ ಈ ಕುರಿತು ಪರ್ಯಾಯ ಮಾರ್ಗ ಹುಡುಕಿ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.

ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ನಿಟ್ಟೆ ವಿಶ್ವವಿದ್ಯಾನಿಲಯದ ನೋಡಲ್ ಅಧಿಕಾರಿ ಡಾ. ದಾನೇಶ್ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕಿಶೋರ್.ಕೆ, ಕಾಲೇಜು ಶಿಕ್ಷಣ ವಿಷೇಶಾಧಿಕಾರಿ ಜಯಕರ ಭಂಡಾರಿ, ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

Join Whatsapp
Exit mobile version