ವಸತಿ ಯೋಜನೆಗಳ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ: ಸಚಿವ ವಿ.ಸೋಮಣ್ಣ

Prasthutha|

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳಿಗೆ ಆಯ್ಕೆಯಾಗುವ ಫಲಾನುಭವಿಗಳ ಆದಾಯ ಮಿತಿಯನ್ನು 1 ಲಕ್ಷದ 20  ಸಾವಿರಕ್ಕೆ ಹಾಗೂ ನಗರ ಪ್ರದೇಶಗಳಲ್ಲಿ 3 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿಂದು ತಿಳಿಸಿದರು.

- Advertisement -

ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ಈ ಸಂಬಂಧ ನಾಳೆಯೇ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದರು.

ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುತ್ತಿದ್ದು, ಇದರಲ್ಲಿ ಜನರ ಹಕ್ಕನ್ನು ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಹೇಳಿದರು.



Join Whatsapp