ಮಂಗಳೂರು ಯೇನೆಪೋಯಾ ಕಾಲೇಜಿನಲ್ಲಿ ಹೆಚ್ಚಿದ ಕೊರೋನಾ ಆತಂಕ : 9 ಕಾಲೇಜುಗಳು ಬಂದ್ !

Prasthutha|

ಮಂಗಳೂರು : ದೇರಳಕಟ್ಟೆಯ ಖಾಸಗಿ ಯೇನೆಪೋಯ ವಿವಿ ಕ್ಯಾಂಪಸ್‌ನಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್–19 ಪ್ರಕರಣಗಳು ವರದಿಯಾಗುತ್ತಿದ್ದು, ಇಲ್ಲಿಯವರೆಗೆ ಒಟ್ಟು 20 ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ ಎಂದು ತಿಳಿದು ಬಂದಿದೆ. ಇದರಿಂದಾಗಿ ತನ್ನ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ನರ್ಸೀಂಗ್ ಸೇರಿದಂತೆ 9 ಕಾಲೇಜುಗಳನ್ನು ಬಂದ್ ಮಾಡಲಾಗಿದೆ.

- Advertisement -

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುವುದು. ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರು ಪರೀಕ್ಷೆಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಇತ್ತ ಮಂಗಳೂರಲ್ಲಿ ಕೋವಿಡ್–19 ಪ್ರಕರಣ ಗಳ ಸಂಖ್ಯೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸೋಮವಾರ 65 ಮಂದಿಗೆ ಕೋವಿಡ್–19 ದೃಢವಾಗಿದ್ದು, 22 ಜನರು ಗುಣಮುಖರಾಗಿದ್ದಾರೆ. ಇದುವರೆಗೆ 34,813 ಮಂದಿಗೆ ಕೋವಿಡ್ ದೃಢವಾಗಿದ್ದು, 33.770 ಮಂದಿ ಗುಣಮುಖರಾಗಿದ್ದಾರೆ. ಸದ್ಯ 302 ಸಕ್ರಿಯ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರು 72 ಗಂಟೆಯೊಳಗೆ ನಡೆಸಲಾದ ಆರ್‌ಟಿ-ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ಹೊಂದಿರುವುದು ಕಡ್ಡಾಯವಾಗಿದೆ ಹಾಗೂ ಆರ್‌ಎಟಿ ಪರೀಕ್ಷಾ ವರದಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

Join Whatsapp