ಏರಿಕೆಯಾಯಿತು ಎಲ್ ಪಿ ಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ: ಪ್ರಮುಖ ನಗರಗಳಲ್ಲಿ ಬೆಲೆ ವಿವರ ಹೀಗಿದೆ

Prasthutha|

ನವದೆಹಲಿ: ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆ ಎಲ್‍ ಪಿ ಜಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 25 ರೂ.ಏರಿಕೆಯಾಗಿದೆ.

- Advertisement -

ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್‍ ಪಿ ಜಿ ಸಿಲಿಂಡರ್ ಬೆಲೆ 859.5 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ 886 ರೂ. ಮುಂಬೈನಲ್ಲಿ 859.5 ರೂ. ಲಕ್ನೋದಲ್ಲಿ 897.5 ರೂ.ಗೆ ತಲುಪಿದೆ. ವಾಣಿಜ್ಯ ಬಳಕೆಯ 19 ಕೆಜಿ ತೂಕದ ಸಿಲಿಂಡರ್ ಬೆಲೆ 68 ರೂ.ನಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಒಂದು ಸಿಲಿಂಡರ್ ಬೆಲೆ 1,618 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 837.50 ರೂ.ಗಳಿಂದ 863 ರೂ.ಗೆ ತಲುಪಲಿದೆ ಎಂದು ವರದಿಯಾಗಿದೆ.

ತೈಲ ಕಂಪನಿಗಳು ಪ್ರತಿ ತಿಂಗಳು ಮೊದಲ ಮತ್ತು 15ನೇ ತಾರೀಖಿನಂದು ಗೃಹ ಬಳಕೆ ಎಲ್‍ ಪಿಜಿ ಸಿಲಿಂಡರ್ ದರವನ್ನು ಪರಿಶೀಲಿಸುತ್ತವೆ. ಇದಕ್ಕೂ ಮೊದಲು ಜುಲೈ 1ರಂದು ತೈಲ ಕಂಪನಿಗಳು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂ.ನಷ್ಟು ಹೆಚ್ಚಿಸಿದ್ದವು.

- Advertisement -

ಅಡುಗೆ ಅನಿಲ ಸಿಲಿಂಡರ್ ದರವನ್ನು ನಿಗದಿ ಮಾಡುವಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಎಷ್ಟಿದೆ ಎಂಬುದನ್ನು ಹಾಗೂ ಡಾಲರ್ ವಿರುದ್ಧದ ರೂಪಾಯಿ ಮೌಲ್ಯವನ್ನು ಪ್ರಮುಖವಾಗಿ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿನ ಏರಿಕೆಯಿಂದಾಗಿ ಸಾಮಾನ್ಯ ಜನರ ಮೇಲೆ ದೊಡ್ಡ ಮಟ್ಟದ ಪರಿಣಾಮ ಆಗುತ್ತದೆ.



Join Whatsapp