Home ಟಾಪ್ ಸುದ್ದಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ, ಫೇಕ್​ನ್ಯೂಸ್ ತಡೆಗೆ ಕ್ರಮ: ಗೃಹ ಸಚಿವ ಪರಮೇಶ್ವರ್

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ, ಫೇಕ್​ನ್ಯೂಸ್ ತಡೆಗೆ ಕ್ರಮ: ಗೃಹ ಸಚಿವ ಪರಮೇಶ್ವರ್

0

ಬೆಂಗಳೂರು: ಭಾರತ – ಪಾಕ್ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ರಾಜ್ಯದ ಸೂಕ್ಷ್ಮ‌ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸುರಕ್ಷತೆ ಕೈಗೊಂಡಿದ್ದೇವೆ. ಪ್ರತಿಯೊಂದು ನಗರ, ಪಟ್ಟಣದಲ್ಲಿ ಜಾಗೃತಿ ವಹಿಸಿದ್ದೇವೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್​ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ. ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು‌.

ಈ ಸಂಬಂಧ ಮುಖ್ಯಮಂತ್ರಿಗಳು ಇಂದು ಸಂಜೆ 4 ಗಂಟೆಗೆ ಸಭೆ ಕರೆದಿದ್ದಾರೆ. ಗೃಹ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತಾರೆ. ನಿನ್ನೆಯಿಂದ ಈಚೆಗೆ ಕೇಂದ್ರ ಸರ್ಕಾರದಿಂದ ಯಾವುದಾದರೂ ಸೂಚನೆಗಳು ಬಂದಿದ್ದರೆ, ಅದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಸನ್ನಿವೇಶ ಎದುರಾಗುವ ಮುನ್ನ ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ಆಹಾರ ಧಾನ್ಯ, ನೀರು, ಆಸ್ಪತ್ರೆಗಳನ್ನು ಸಜ್ಜು ಮಾಡಿಕೊಂಡಿದ್ದೇವೆ. ಅಂತಹ ಘಟನೆಗಳು ನಡೆದರೆ ಎದುರಿಸಲು ನಾವು ಸಿದ್ಧವಾಗಿರಬೇಕು ಎಂಬುದನ್ನು ಹೊರತುಪಡಿಸಿದರೆ, ಅಂತಹ ಸನ್ನಿವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು

NO COMMENTS

LEAVE A REPLY

Please enter your comment!
Please enter your name here

Exit mobile version