ಹೆಚ್ಚಿದ ಕಾಡಾನೆ ಹಾವಳಿ; ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

Prasthutha|

ಮೂಡಿಗೆರೆ: ತಾಲೂಕಿನ ಎತ್ತಿನಭುಜ ವ್ಯಾಪ್ತಿಯಲ್ಲಿ ಆನೆಗಳು ಕಾಣಿಸಿಕೊಂಡಿರುವ ಹಿನ್ನಲೆ ಪ್ರಸಿದ್ಧ ಚಾರಣಕ್ಕೆ ಕರ್ನಾಟಕ ಅರಣ್ಯ ಇಲಾಖೆಯ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗ ತಾತ್ಕಾಲಿಕವಾಗಿ ನಿಷೇಧ ಹೇರಿದೆ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.

- Advertisement -

ಮಲೆನಾಡಿನ ಅನೇಕ ಗ್ರಾಮಗಳಲ್ಲಿ ನಿರಂತರ ಆನೆ ದಾಳಿ ನಡೆಯುತ್ತಿದ್ದು,ಜನರು ಆತಂಕಗೊಂಡಿದ್ದಾರೆ. ತಾಲೂಕಿನ ಕೆಲವು ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಒರ್ವ ಕೂಲಿ ಕಾರ್ಮಿಕನನ್ನು ಕಾಲಿನಿಂದ ತುಳಿದು ಸ್ಥಳದಲ್ಲಿಯೇ ಕೊಂದು ಹಾಕಿರುವ ಘಟನೆ ನಡೆದಿದೆ. ಈ ಘಟನಾ  ಸಂಬಂಧ ಸ್ಥಳೀಯರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು,ಸ್ಥಳೀಯರು ಮತ್ತು ಸಾರ್ವಜನಿಕರು ಮೃತ ದೇಹವನ್ನು ಮೂಡಿಗೆರೆ ಅರಣ್ಯ ಇಲಾಖೆ ಎದುರುಗಡೆ ಇಟ್ಟು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ತೀವ್ರಗೊಂಡ ಹಿನ್ನಲೆ,  ಆನೆಯನ್ನು ಹಿಡಿಯುವ ಭರವಸೆ ಅರಣ್ಯ ಇಲಾಖೆಯಿಂದ  ಸಿಕ್ಕಿದಂತಾಗಿದೆ. ಕಾಡಾನೆಗಳು ಈ ಭಾಗದಲ್ಲಿ ತಿರುಗಾಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ಸ್ಥಳೀಯರ ಒತ್ತಾಯದ ಮೇರೆಗೆ ಹಾಗೂ ಮೇಲಧಿಕಾರಿಗಳ   ನಿರ್ದೇಶನದಂತೆ ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕವಾಗಿ  ನಿಷೇಧಿಸಲಾಗಿದೆ.

- Advertisement -

,

Join Whatsapp