ಕೊರೋನಾ ಸೋಂಕು ಹೆಚ್ಚಳ: ಗಡಿಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋವಿಡ್ ಪರಿಸ್ಥಿತಿ ಕುರಿತಂತೆ ಐದು ಜಿಲ್ಲೆಗಳ ಡಿಸಿ ಗಳೊಂದಿಗೆ ಸಭೆ ನಡೆಸಿದರು.

- Advertisement -

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ನಿಯಂತ್ರಣ, ಲಸಿಕೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಿದ್ದು, ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು ಸೂಚಿಸಲಾಗಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಹಾಸನ, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಈ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರು, ಆಸ್ಪತ್ರೆಗಳ ವ್ಯವಸ್ಥೆ, ಟೆಸ್ಟಿಂಗ್ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.

ಈ ನಡುವೆ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಮಂಗಳೂರು, ಉಡುಪಿಯಲ್ಲೂ ಲಸಿಕಾಕರಣ ಹೆಚ್ಚಿಸಲು ತಿಳಿಸಲಾಗಿದೆ. 35 ಸಾವಿರ ಲಸಿಕೆ ಸಂಗ್ರಹ ಇದೆ. ಇವುಗಳ ವಿತರಣೆಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Join Whatsapp