ಹೊಸದಿಲ್ಲಿ: ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇನ್ನು ರಾಜ್ಯದಲ್ಲಿ ಬೆಂಗಳೂರಿನ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾ ಆರೋಹಣ ಮಾಡಲಿದ್ದಾರೆ.
ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಕಲ ಸಿದ್ದತೆಯಾಗಿದ್ದು, ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ತೆರೆದ ಜೀಪ್ನಲ್ಲಿ ಪರೇಡ್ ಪರಿವೀಕ್ಷಣೆ, ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ. ಬಳಿಕ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನ
ಕೆಂಪುಕೋಟೆಯ 77ನೇ ಸ್ವಾತಂತ್ರ್ಯ ದಿನಾಚರಣೆಗೆ 31 ಜನ ಕನ್ನಡಿಗರು ಸೇರಿದಂತೆ ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನಿಸಲಾಗಿದೆ.
ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿಯಿಂದ ಧ್ವಜಾರೋಹಣ
77ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಇಂದು ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 7.33ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಾರೆ. ರಾಷ್ಟ್ರೀಯ ಗೌರವ ಸಲ್ಲಿಕೆ, ಬ್ಯಾಂಡ್ ಮೂಲಕ ರಾಷ್ಟ್ರಗೀತೆ, ಗೌರವ ವಂದನೆ ನೆರವೇರುತ್ತದೆ.
ಹಾಗೇ ದೇಶದ ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಮತ್ತು ಬಹುತೇಕ ಖಾಸಗಿ ಕಚೇರಿಗಳ ಎದುರು ಧ್ವಜಾರೋಹಣ ಮಾಡಲಾಗುತ್ತದೆ.