ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಾಡಿನೆಲ್ಲೆಡೆ ಸರಳವಾಗಿ ಸ್ವಾತಂತ್ರ್ಯೋತ್ಸವವನ್ನು ಅಚರಿಸಲಾಯಿತು.
ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.
ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ಧ್ವಜಾರೋಹಣವನ್ನು ನೆರವೇರಿಸಿ ಜಿಲ್ಲೆಯ ಜನತೆಗೆ ಶುಭ ಹಾರೈಸಿದರು.
ಮಾತ್ರವಲ್ಲದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಸಂಭ್ರಮಿಸಿದರು.
ಉಳಿದಂತೆ ಸರ್ಕಾರಿ ಕಚೇರಿ, ಮಸೀದಿ, ಮದ್ರಸಾ, ಸಂಘ ಸಂಸ್ಥೆಗಳಲ್ಲಿಯೂ ಸ್ವಾತಂತ್ರೋತ್ಸವ ಆಚರಿಸಿದ ಬಗ್ಗೆ ವರದಿಯಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸರಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು.