Home ಟಾಪ್ ಸುದ್ದಿಗಳು ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವ: “ಶಿಖರವಿಂದ ಸಾಗರ” ಅಭಿಯಾನ

ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವ: “ಶಿಖರವಿಂದ ಸಾಗರ” ಅಭಿಯಾನ

ಬೆಂಗಳೂರು: ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರವಿಂದ ಸಾಗರ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ 5 ಯುವತಿಯರು ಕಾಶ್ಮೀರದ Kolhoi ಪರ್ವತ ಹತ್ತಲಿದ್ದಾರೆ. ನಂತರ ಕಾಶ್ಮೀರದಿಂದ ಹೊರಟು 3000 ಕಿ.ಮೀ. ಸೈಕಲ್ ಯಾನ ಮಾಡುತ್ತಾ, ಕಾರವಾರ ತಲುಪಿ ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ. ಸಮುದ್ರದ ಮೂಲಕ ಕಯಾಕಿಂಗ್ ಯಾನ ಮಾಡುತ್ತಾ ಮಂಗಳೂರು ತಲುಪಲಿದ್ದಾರೆ ಎಂದು ತಿಳಿಸಿದರು.

ಇದು ಸುಮಾರು 45 ದಿನಗಳ ಸಾಹಸ ಯಾತ್ರೆ ಆಗಿದ್ದು, ಸ್ತ್ರೀ ಶಕ್ತಿ ಧೈರ್ಯ, ಸಾಹಸ, ಧೈರ್ಯ ಸಾಹಸಿ ಲಕ್ಷ್ಮೀ, ನಾರಿಯ ಜೊತೆ ಪುರುಷರ ವಿಕಾಸ’ ಎನ್ನುವಂತಹ ತತ್ವವನ್ನು ಬಿಂಬಿಸುವಂತಹ ಒಂದು ವಿಭಿನ್ನವಾದ ಕಾರ್ಯಕ್ರಮವಾಗಿರುತ್ತದೆ. ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿ ಹಾಗೂ ಭಾರತೀಯ ಪರ್ವತರೋಹಣ ಸಂಸ್ಥೆಯ ಸಹಯೋಗದೊಂದಿಗೆ ನಡೆಸುತ್ತಿರುವ ಈ ಯಾನಕ್ಕೆ ಇದೇ ಆಗಸ್ಟ್, 17 ರಂದು ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಪಾಲ್ಗೊಳ್ಳುತ್ತಿರುವ ಸಾಹಸಿಗರು.
ಪುಷ್ಪ -ಮಡಿಕೇರಿ
ಐಶ್ವರ್ಯ- ಶಿವಮೊಗ್ಗ
ಧನಲಕ್ಷ್ಮಿ -ಶಿವಮೊಗ್ಗ
ಆಶಾ- ಬೆಂಗಳೂರು
ಬಿಂದು -ಮೈಸೂರು

ಮಿಷನ್ ಒಲಂಪಿಕ್ಸ್ :
ಪ್ಯಾರಿಸ್ನಲ್ಲಿ ನಡೆಯುವ 2024ರ ಒಲಂಪಿಕ್ಸ್ಗೆ ಕರ್ನಾಟಕದಿಂದ ಕನಿಷ್ಠ 100 ಕ್ರೀಡಾಪಟುಗಳನ್ನು ಕಳುಹಿಸುವ ಯೋಜನೆ ರೂಪಿಸಿದ್ದು, ಈಗಾಗಲೇ 35 ಕ್ರೀಡಾಪಟುಗಳನ್ನು ಗುರುತಿಸಲಾಗಿದೆ. ಈ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಸಹ ಅವಶ್ಯ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಸಚಿವರು ತಿಳಿಸಿದರು.

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್-2021 : ದೇಶದ ಪ್ರತಿಷ್ಠಿತ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್-2021ನ್ನು ಬೆಂಗಳೂಲಿನಲ್ಲಿ ಮಾರ್ಚ್ 5 ರಿಂದ 12 ದಿನ ನಡೆಸಲಾಗುತ್ತಿದ್ದು, ದೇಶದ ಎಲ್ಲೆಡೆಯಿಂದ 20 ಕ್ರೀಡೆಗಳ 7000 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕ್ರೀಡಾಕೂಟ ಉದ್ಘಾಟನೆಗೆ ಆಹ್ವಾನಿಸಲಾಗುವುದು. ಕ್ರೀಡಾಕೂಟದ ಆಯೋಜನೆ ಜೈನ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ನಡೆಯಲಿದೆ ಎಂದರು.

ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ಮೀಸಲಾತಿ: ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಶೇಕಡ 2 ರಷ್ಟು ಮೀಸಲಾತಿಯನ್ನು ಕ್ರೀಡಾಪಟುಗಳಿಗೆ ಮೀಸಲಿಸಿದ್ದು, ಇತರ ಇಲಾಖೆಗಳಗೂ ವಿಸ್ತರಿಸುವ ಕಾರ್ಯ ಚಾಲನೆಯಲ್ಲಿದೆ.
ಕ್ರೀಡಾಪಟುಗಳನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಲು ಕಂಠೀರವ ಸ್ಟೇಡಿಯಂನಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪಿಸಲಾಗಿದ್ದು, ಪ್ರಸಕ್ತಸಾಲಿನಿಂದ ರೂ.2.00 ಕೋಟಿ ವೆಚ್ಚದಲ್ಲಿ ಮಂಡ್ಯದಲ್ಲಿಯೂ ಸ್ಥಾಪಿಸಲಾಗುವುದು.
ರಾಜ್ಯದಲ್ಲಿ 34 ಕ್ರೀಡಾ ವಸತಿ ನಿಲಯಗಳಿದ್ದು, 2300 ಕ್ಕೂ ಹೆಚ್ಚು ವಿದ್ಯಾರ್ಥಿಗಳಗ 150 ಜನ ತರಬೇತುದಾರರಿಂದ ವಿವಿಧ ಕ್ರೀಡೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕ್ರೀಡಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಶುಲ್ಕ ವಿನಾಯಿತಿಯನ್ನು ಸಹ ಇಲಾಖೆಯಿಂದ ನೀಡಲಾಗುತ್ತಿದೆ. ಕ್ರೀಡಾ ವಸತಿ ನಿಲಯಗಳ ಆಧುನೀಕರಣಕ್ಕೆ ಪ್ರಸಕ್ತ ಸಾಲಿನಲ್ಲಿ ರೂ.5.75 ಕೋಟಿ ವೆಚ್ಚ ಭರಿಸಲಾಗುತ್ತಿದೆ ಎಂದು ತಿಳಿಸಿದರು.

Join Whatsapp
Exit mobile version