ಮಕ್ಕಳ ಕೂಟದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಜಮೀರ್ ಅಹ್ಮದ್ ರಿಂದ ಧ್ವಜಾರೋಹಣ

Prasthutha|

ಬೆಂಗಳೂರು: ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಅವರು ಇಂದು ಬಿಬಿಎಂಪಿ ವತಿಯಿಂದ ಚಾಮರಾಜಪೇಟೆಯ ಮಕ್ಕಳಕೂಟದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದರು.

- Advertisement -

ಬಳಿಕ ಸ್ವರಾಜ್ಯ 75 ಎಂಬ ಪುಸ್ತಕದೊಂದಿಗೆ ಹೂವಿನ ಗಿಡಗಳನ್ನು ವಿತರಿಸಿ, ಸಿಹಿ ಹಂಚಿ ಮಾತನಾಡಿದ ಅವರು,  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ‘ಪ್ರತಿ ಮನೆಗೂ ತಿರಂಗ’ ಎಂಬ ಅಭಿಯಾನವನ್ನು ಘೋಷಿಸಿದ್ದು ಹೆಮ್ಮೆಯ ಸಂಗತಿ. ಎಲ್ಲರೂ ಮನೆ ಮನೆಯಲ್ಲಿ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.



Join Whatsapp