ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಸಮೀಪದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದವರೆಗೆ ಸೋಮವಾರ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆ ನಡೆಯಿತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ, ಧ್ರುವನಾರಾಯಣ, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಯು ಟಿ ಖಾದರ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯಾಧ್ಯಕ್ಷ ನಲಪಾಡ್ ಮತ್ತಿತರರು ಭಾಗವಹಿಸಿದರು.
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಸಮಾರೋಪ ಸಮಾರಂಭದಲ್ಲಿಯೂ ಹಲವು ಮುಖಂಡರು ಪಾಲ್ಗೊಂಡಿದ್ದರು. ತ್ರಿವರ್ಣ ಬಲೂನುಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಲಾಯಿತು.