ಜೈಪುರ: ಮತದಾನದ ವೇಳೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ಕಪಾಳಕ್ಕೆ ಹೊಡೆದ ಆರೋಪ ಮೇಲೆ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಉಪ ಚುನಾವಣೆ ಮತದಾನದ ವೇಳೆ ಡಿಯೋಲಿ-ಉನಿಯಾರಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನರೇಶ್ ಮೀನಾ ಅವರು, ಚುನಾವಣಾ ನಿಯಮಗಳನ್ನು ಮೇಲ್ವಿಚಾರಣೆ ಮಾಡಲು ಕರ್ತವ್ಯದಲ್ಲಿದ್ದ ಎಸ್ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಮೀನಾ ಅವರು, ಚುನಾವಣಾಧಿಕಾರಿ ಮೂವರನ್ನು ಬಳಿಸಿಕೊಂಡು ಮತ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.