ಭಾರತ | ಅತಿ ದೊಡ್ಡ ಹೆದ್ದಾರಿ ಸಂಪರ್ಕ ಹೊಂದಿರುವ ವಿಶ್ವದ 2ನೇ ರಾಷ್ಟ್ರ

Prasthutha|

ಹೊಸದಿಲ್ಲಿ: ಭಾರತವು ಅತಿ ದೊಡ್ಡ ಹೆದ್ದಾರಿ ಸಂಪರ್ಕ ಹೊಂದಿರುವ ವಿಶ್ವದ 2ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಿಳಿಸಿದೆ.

- Advertisement -

ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ 64 ಲಕ್ಷ ಕಿ.ಮೀ. ವ್ಯಾಪ್ತಿಯ ಹೆದ್ದಾರಿಯನ್ನು ನಿರ್ಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ನವೀಕರಣ ಹಾಗೂ ನೂತನ ಹೆದ್ದಾರಿಗಳ ನಿರ್ಮಾಣದ ಪ್ರಮಾಣ ಮೂರು ಪಟ್ಟು ಹೆಚ್ಚಾಗಿದ್ದು, ಈ ಮೂಲಕ ಕೇಂದ್ರ ಸರಕಾರ ಹೊಸ ದಾಖಲೆಯನ್ನು ನಿರ್ಮಿಸಿದೆ ಎಂದು  ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

Join Whatsapp