ಗಾಝಾ ಕದನ ವಿರಾಮ ಮತದಾನದಿಂದ ದೂರವುಳಿದ ಭಾರತ: ಆಘಾತಕರ ಎಂದ ಪ್ರಿಯಾಂಕಾ ಗಾಂಧಿ

Prasthutha|

- Advertisement -

ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯ ನಿರ್ಣಯದ ಮತದಾನದಿಂದ ಭಾರತ ದೂರವುಳಿದಿದೆ.ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಘಾತ ವ್ಯಕ್ತಪಡಿಸಿದ್ದಾರೆ. ನಾಚಿಕೆಗೇಡಿನ ಸಂಗತಿ ಎಂದೂ ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ಸಾವಿಗೀಡಾಗುತ್ತಿರುವಾಗ ಭಾರತ ಮೌನವಾಗಿ ನೋಡುತ್ತಿದೆ ಎಂದರೆ ನಾಚಿಕೆಗೇಡು. ಈಗ ಭಾರತವು ಪ್ರತಿಯೊಂದಕ್ಕೂ ವಿರುದ್ಧವಾಗಿ ನಿಲ್ಲುತ್ತಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

- Advertisement -

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ ಮಾನವೀಯ ಒಪ್ಪಂದ ಮತ್ತು ಗಾಝಾ ಪಟ್ಟಿಯಲ್ಲಿ ಅಡೆತಡೆಯಿಲ್ಲದ ಮಾನವೀಯ ಪ್ರವೇಶಕ್ಕಾಗಿ ಕರೆ ನೀಡಿ ‘ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವುದು’ ಎಂಬ ಶೀರ್ಷಿಕೆಯ ಜೋರ್ಡಾನ್ ಕರಡು ನಿರ್ಣಯದ ಮೇಲೆ ನಡೆದ ಮತದಾನದಿಂದ ಭಾರತ ದೂರ ಉಳಿದಿದೆ. ಇದು ಆಘಾತಕಾರಿ ಎಂದಿದ್ದಾರೆ.

ಈ ವಿಚಾರವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಿಯಾಂಕಾ, ಮಹಾತ್ಮಗಾಂಧಿಯವರ ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿ ಮಾಡುತ್ತದೆ ಎಂಬ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

”ಗಾಝಾದಲ್ಲಿ ಕದನ ವಿರಾಮಕ್ಕಾಗಿ ನಡೆದ ಮತದಾನದಿಂದ ನಮ್ಮ ದೇಶವು ದೂರ ಉಳಿದಿರುವುದಕ್ಕೆ ನನಗೆ ಆಘಾತ ಮತ್ತು ನಾಚಿಕೆಯಾಗುತ್ತಿದೆ” ಎಂದು ಹೇಳಿದ್ದಾರೆ.

”ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿತವಾಗಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ ಎಂದು ಅವರು ಹೇಳಿದ್ದಾರೆ.

ಶುಕ್ರವಾರ ಎಕ್ಸಾನಲ್ಲಿ ಪೋಸ್ಟ್ ಮಾಡಿದ್ದ ಅವರು, ಗಾಝಾದಲ್ಲಿ 7,000 ಜನರನ್ನು ಕೊಂದ ನಂತರವೂ ರಕ್ತಪಾತ ಮತ್ತು ಹಿಂಸಾಚಾರದ ಚಕ್ರ ನಿಂತಿಲ್ಲ. ಈ 7,000 ಜನರಲ್ಲಿ 3,000 ಮುಗ್ಧ ಮಕ್ಕಳು ಎಂದು ಬೇಸರ ವ್ಯಕ್ತಪಡಿಸಿದ್ದರು.

Join Whatsapp