Home ಟಾಪ್ ಸುದ್ದಿಗಳು ಮಮತಾ ಇಲ್ಲದ INDIA ಮೈತ್ರಿಕೂಟ ಊಹಿಸುವುದೂ ಅಸಾಧ್ಯ: ಜೈರಾಮ್ ರಮೇಶ್

ಮಮತಾ ಇಲ್ಲದ INDIA ಮೈತ್ರಿಕೂಟ ಊಹಿಸುವುದೂ ಅಸಾಧ್ಯ: ಜೈರಾಮ್ ರಮೇಶ್

ಅಸ್ಸಾಂ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲದೆ ಇಂಡಿಯಾ ಮೈತ್ರಿಕೂಟದ ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.


ಭಾರತ್ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಅಸ್ಸಾಂನ ಉತ್ತರ ಸಲ್ಮಾರಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈರಾಮ್ ರಮೇಶ್, ‘ಟಿಎಂಸಿ ವಿರೋಧ ಪಕ್ಷಗಳ ಮೈತ್ರಿಕೂಟದ ಪ್ರಮುಖ ಆಧಾರಸ್ತಂಭವಾಗಿದೆ’ ಎಂದರು.


‘ಮಮತಾ ಬ್ಯಾನರ್ಜಿ ಅವರನ್ನು ಬಿಟ್ಟು ಇಂಡಿಯಾ ಮೈತ್ರಿಕೂಟ ಇಲ್ಲ. ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸಲಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಾಗಲಿದ್ದೇವೆ’ ಎಂದು ತಿಳಿಸಿದರು.

Join Whatsapp
Exit mobile version