ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ಪಕ್ಷಗಳ ಸಭೆಯು ದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಆರಂಭವಾಗಿದೆ.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಆರ್ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ.
ಲೋಕಸಭಾ ಚುನಾವಣೆಗೆ ಇಂದು ಅಂತಿಮ ಹಂತದ ಮುತದಾನ ಮುಕ್ತಾಯವಾಗಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಅದಕ್ಕೂ ಮೊದಲು ಮೈತ್ರಿಕೂಟದ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ಸಭೆ ಆಯೋಜಿಸಲಾಗಿದೆ.