ದೆಹಲಿ: ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತದೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಬಣದಲ್ಲಿನ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ ಒಂದು ದಿನದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಟಿಎಂಸಿಯೊಂದಿಗಿನ ಜಟಾಪಟಿಯ ನಡುವೆಯೇ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪಶ್ಚಿಮ ಬಂಗಾಳವನ್ನು ಪ್ರವೇಶಿಸಿತು. ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ಖುಷಿಯಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್ ಎಸ್ ಎಸ್ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿವೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಟ್ಟಾಗಿ ಹೋರಾಡಲಿದೆ ಎಂದು ಹೇಳಿದ್ದಾರೆ.