ಜೂನ್ 4ಕ್ಕೆ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಕೇಜ್ರಿವಾಲ್

Prasthutha|

ಲಖನೌ: ಜೂನ್ 4ರಂದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -


ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿಯು 220ಕ್ಕಿಂತಲೂ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ ಎಂದು ಈಗಿನ ಟ್ರೆಂಡ್ ಹೇಳುತ್ತಿದೆ. ಹರಿಯಾಣ, ದೆಹಲಿ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ. ಜೂನ್ 4ರಂದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಹೇಳಿದರು.


ಸಂವಿಧಾನವನ್ನು ರಕ್ಷಿಸಲು ಇಂಡಿಯಾ ಮೈತ್ರಿಕೂಟಕ್ಕೆ ಮತ ಹಾಕುವಂತೆ ಉತ್ತರ ಪ್ರದೇಶದ ಜನರಲ್ಲಿ ವಿನಂತಿ ಮಾಡುತ್ತೇನೆ ಎಂದರು.



Join Whatsapp