ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಮುನಿಯಪ್ಪ

Prasthutha|

ಕೋಲಾರ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಗುರುವಾರ ಹೇಳಿದ್ದಾರೆ.

- Advertisement -

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪರ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಅವರು,ದೇಶದಲ್ಲಿ ಕಾಂಗ್ರೆಸ್ ಗೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿಗೆ ಇದು ವಿಶ್ರಾಂತಿಯ ಸಮಯ. ಜನರು ಕಾಂಗ್ರೆಸ್ ಮತ್ತು ಅದರ I.N.D.I.A ಮೈತ್ರಿಕೂಟದ ಪಕ್ಷಗಳನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ I.N.D.I.A ಬಣವನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ ಎಂದು ಹೇಳಿದರು.

Join Whatsapp