INDIA ಮೈತ್ರಿಕೂಟ 300 ಸ್ಥಾನಗಳನ್ನು ಗೆಲ್ಲಲಿದೆ, NDA 200 ಸ್ಥಾನಗಳನ್ನು ಮಾತ್ರ ಗಳಿಸಲಿದೆ: ಡಿಕೆಶಿ

Prasthutha|

ಲಖನೌ: ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಸುಮಾರು 300 ಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆ ಮತ್ತು ಎನ್ ಡಿಎ 200 ಸ್ಥಾನಗಳನ್ನು ಮಾತ್ರ ಗಳಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

- Advertisement -


ಉತ್ತರ ಪ್ರದೇಶದ ಲಖನೌದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿಕೆ ಶಿವಕುಮಾರ್, ‘ಇಂಡಿಯಾ ಮೈತ್ರಿಕೂಟವು ಸುಮಾರು 300 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಎನ್ ಡಿಎ 200 ರ ಆಸುಪಾಸಿನಲ್ಲಿರುತ್ತದೆ. ನಾವು ಸಾಮೂಹಿಕ ನಾಯಕತ್ವವನ್ನು ನಂಬುತ್ತೇವೆ.. ನಾವು ಚುನಾವಣೆಯಲ್ಲಿ ಗೆಲ್ಲುತ್ತೇವೆ ಮತ್ತು ಸರ್ಕಾರ ರಚಿಸಲು ಹಾಗೂ ಪ್ರಧಾನಿ ಆಯ್ಕೆಗೆ ಒಟ್ಟಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.


ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್, ಕಪ್ಪುಹಣ, ರೈತರ ಆದಾಯ ಮತ್ತು ನಿರುದ್ಯೋಗಕ್ಕೆ ಬಿಜೆಪಿ ಹೊಣೆಗಾರರಾಗಬೇಕು ಎಂದು ಹೇಳಿದರು.

Join Whatsapp