ಅಫ್ಘಾನಿಸ್ತಾನಕ್ಕೆ ಹೊಸ ವೀಸಾ ಘೋಷಿಸಿದ ಭಾರತ

Prasthutha|

ದೆಹಲಿ: ಅಫ್ಘಾನಿಸ್ತಾನದ ಅಧಿಕಾರವನ್ನು ತಾಲಿಬಾನ್ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಭಾರತಕ್ಕೆ ಬರಲು ಬಯಸುವ ಅಫ್ಘಾನ್ನರ ವೀಸಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಹೊಸ ಮಾದರಿಯ ವೀಸಾವನ್ನು ಘೋಷಿಸಿದೆ.

- Advertisement -

ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಇಲಾಖೆಯು ‘ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ’ ಎಂಬ ಹೊಸ ಮಾದರಿಯ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಲಾಗುತ್ತಿದೆ,‘ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ.

Join Whatsapp