Home ಟಾಪ್ ಸುದ್ದಿಗಳು ಮೋದಿ ಸೋತರೆ ಮಾತ್ರ ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯ: ಸುಬ್ರಮಣಿಯನ್ ಸ್ವಾಮಿ

ಮೋದಿ ಸೋತರೆ ಮಾತ್ರ ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ವಾರಣಾಸಿಯಲ್ಲಿ ಸೋತರೆ ಮಾತ್ರ ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.


ಎಕ್ಸ್ ನಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ ಗೆ ಮತ್ತೆ ಭೋಪಾಲ್ ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್ ಎಸ್ ಎಸ್ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, “2024 ರಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಮತ್ತು ಅದೇ ಸಮಯದಲ್ಲಿ ಮೋದಿಯನ್ನು ವಾರಣಾಸಿಯಲ್ಲಿ ಸೋಲಿಸಿದರೆ ಮಾತ್ರ ನಾವು ಹಿಂದೂ ರಾಷ್ಟ್ರವನ್ನು ಮಾಡಲು ಸಾಧ್ಯವಾಗುತ್ತದೆ” ಎಂದು ಸುಬ್ರಮಣಿಯನ್ ಸ್ವಾಮಿ ಪೋಸ್ಟ್ ಮಾಡಿದ್ದಾರೆ.

Join Whatsapp
Exit mobile version