ದೇಶದಲ್ಲಿ ಶಾಂತಿ ಕಾಪಾಡಿ: ಬೆಂಬಲಿಗರಿಗೆ ಚಂದ್ರಶೇಖರ್ ಆಜಾದ್ ಮನವಿ

Prasthutha|

- Advertisement -

ಲಕ್ನೋ: ಗುಂಡಿನ ದಾಳಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಇದೀಗ ಆಸ್ಪತ್ರೆಯಿಂದಲೇ ಸಂದೇಶವೊಂದನ್ನು ರವಾನಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಜಾದ್ ಮಾಧ್ಯಮವೊಂದರ ಜೊತೆ ಮಾತನಾಡಿ, ಇಂತಹ ಹಠಾತ್ ದಾಳಿಯನ್ನು ನಾನು ನಿರೀಕ್ಷಿಸಿರಲಿಲ್ಲ. ನನ್ನ ಸ್ನೇಹಿತರು, ಬೆಂಬಲಿಗರು ಮತ್ತು ದೇಶಾದ್ಯಂತ ಕಾರ್ಯಕರ್ತರಲ್ಲಿ ಶಾಂತಿ ಕಾಪಾಡುವಂತೆ ನಾನು ಮನವಿ ಮಾಡಲು ಬಯಸುತ್ತೇನೆ. ನಾವು ನಮ್ಮ ಹೋರಾಟವನ್ನು ಸಾಂವಿಧಾನಿಕವಾಗಿ ಮುಂದುವರಿಸುತ್ತೇವೆ. ಕೋಟ್ಯಂತರ ಜನರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ