Home ಕ್ರೀಡೆ ಸೂಪರ್ 8 ಸುತ್ತಿನ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 47 ರನ್​​ಗಳಿಂದ ಸೋಲಿಸಿದ ಭಾರತ

ಸೂಪರ್ 8 ಸುತ್ತಿನ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 47 ರನ್​​ಗಳಿಂದ ಸೋಲಿಸಿದ ಭಾರತ

ವೆಸ್ಟ್ ಇಂಡೀಸ್​: ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಸೂಪರ್ 8 ಸುತ್ತಿನ ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್​​ಗಳ ಭರ್ಜರಿ ಜಯ ಸಾಧಿಸಿದೆ.

ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ಸತತ 4 ಪಂದ್ಯಗಳನ್ನು ಗೆದ್ದಂತಾಗಿದೆ. ಟೀಂ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಆಫಘಾನಿಸ್ತಾನ ತಂಡದ ವಿರುದ್ಧ ಸುಲಭ ವಿಜಯ ತನ್ನದಾಗಿಸಿಕೊಂಡಿದೆ.

ಸೂರ್ಯಕುಮಾರ್ ಯಾದವ್​ (53 ರನ್​, 28 ಎಸೆತ, 5 ಫೊರ್, 3 ಸಿಕ್ಸರ್) ಹಾಗೂ ಜಸ್​ಪ್ರಿತ್ ಬುಮ್ರಾ (3 ವಿಕೆಟ್​, 4 ಓವರ್​, 7 ರನ್​) ಬಾರತ ತಂಡದ ಗೆಲುವಿನ ರೂವಾರಿಗಳೆನಿಸಿಕೊಂಡರು. ಭಾರತ ತಂಡ ಸೂಪರ್ 8 ಹಂತದ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ಇಲ್ಲಿನ ಕೆನ್ಸಿಂಗ್ಟನ್​ ಓವಲ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 181 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಅಫ್ಘಾನಿಸ್ತಾನ ತಂಡ 134 ರನ್‌ಗೆ ಆಲ್​ಔಟ್​ ಆಗಿದೆ. ಈ ಮೂಲಕ 47 ರನ್​ಗಳ ಸೋಲಿಗೆ ಒಳಗಾಗಿದೆ.

Join Whatsapp
Exit mobile version