ಭಾರತಕ್ಕೆ ಲಾಕ್’ಡೌನ್ ಅಗತ್ಯವಿಲ್ಲ: ಭಾರತೀಯ ವೈದ್ಯಕೀಯ ಸಂಘ

Prasthutha|

ನವದೆಹಲಿ: ಭಾರತಕ್ಕೆ ಲಾಕ್ ಡೌನ್ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಸಲಹೆ ನೀಡಿದೆ.

- Advertisement -


ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘದ ಡಾ ಗೋಯಲ್ ಮಾಹಿತಿ ನೀಡಿದ್ದು, ಚೀನಾದಲ್ಲಿ ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆ ಆಗುತ್ತಿದ್ದರೂ ಭಾರತದಲ್ಲಿ ಲಾಕ್ ಡೌನ್ ಮಾಡುವ ಅಗತ್ಯವಿಲ್ಲ. ಶೇ.95 ರಷ್ಟು ಜನರು ಈಗಾಗಲೇ ಲಸಿಕೆಯನ್ನು ಪಡೆದಿರುವ ಕಾರಣ ಲಾಕ್ ಡೌನ್ ಮಾಡುವ ಅಗತ್ಯ ಇಲ್ಲ. ಭಾರತೀಯರು ಚೀನಾದ ಜನರಿಗಿಂತ ಬಲವಾದ ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದಾರೆ. ಭಾರತವು ಕೋವಿಡ್ ಮೂಲಭೂತ ಅಂಶಗಳಾದ ಪರೀಕ್ಷೆ, ಚಿಕಿತ್ಸೆ, ಪತ್ತೆಹಚ್ಚುವಿಕೆಗೆ ಮರಳಬೇಕು ಎಂದು ಅವರು ಹೇಳಿದ್ದಾರೆ.


ಕೇಂದ್ರ ಆರೋಗ್ಯ ಸಚಿವಾಲಯದ ಗುರುವಾರದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 185 ಹೊಸ ಪ್ರಕರಣಗಳು ದೃಢಪಟ್ಟರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,402 ಕ್ಕೆ ಇಳಿದಿದೆ.



Join Whatsapp